ನವೆಂಬರ್ 19 ರಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಶೈಕ್ಷಣಿಕ ಕಾರ್ಯಾಗಾರ


ವರದಿ: ನಜೀರ್ ಅಹಮದ್
 
ಮೈಸೂರು : ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ನವೆಂಬರ್ 19 ರಂದು ಬೆಳಗ್ಗೆ 9.30ಕ್ಕೆ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಶೈಕ್ಷಣಿಕ ಕಾರ್ಯಾಗಾರ, ಕನ್ನಡ ರಾಜ್ಯೋತ್ಸವ, ಉರ್ದು ದಿನ ಆಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕೆಎಸ್‍ಜಿ-ಮೇವಾ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಫ್ಸರ್ ಪಾಷ ತಿಳಿಸಿದ್ದಾರೆ.

ಭಾನುವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು, ಉದ್ಯೋಗ ಮತ್ತು ತರಬೇತಿ ನೀಡುವ ಬಗ್ಗೆ ಮಾರ್ಗದರ್ಶನ ನೀಡುವುದು ಸಮುದಾಯದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಜನರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವುದು ನಮ್ಮ ಸಂಘಟನೆಯ ಉದ್ದೇಶವಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಭಾರತದ ಸ್ವಾತಂತ್ರ್ಯ ಚಳುವಳಿಯ ಪ್ರಮುಖರಲ್ಲಿ ಒಬ್ಬರಾಗಿದ್ದು, ದೇಶದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ವಿಶೇಷ ಉಪನ್ಯಾಸದೊಂದಿಗೆ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.

ಅಲ್ಲದೇ ಕನ್ನಡ ರಾಜ್ಯೋತ್ಸವ ಹಾಗೂ ಉರ್ದು ದಿನಾಚರಣೆ ಕುರಿತು ಉಪನ್ಯಾಸ, ಪೋಷಕರಿಗೆ ಶೈಕ್ಷಣಿಕ ಮಾಹಿತಿ ನೀಡಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ತಜ್ಞರಾದ ಪ್ರೊ.ನಬೀಜಾನ್ ಕೆಎಸ್‍ಜಿ-ಮೇವಾ ಸಂಘಟನೆ ಮೈಸೂರು ಜಿಲ್ಲಾ ಅಧ್ಯಕ್ಷರಾದ ಸೈಯದ್ ಮುದಸ್ಸಿರ್, ಪ್ರಧಾನ ಕಾರ್ಯದರ್ಶಿ ಅಜೀಜ್ ಖಾನ್, ಹಿರಿಯ ಉಪಾಧ್ಯಕ್ಷರಾದ ಸೈಯದ್ ದಸ್ತಗೀರ್, ಸಂಘಟನಾ ಕಾರ್ಯದರ್ಶಿ ಇರ್ಷಾದ್ ಅಹಮದ್, ಪತ್ರಿಕಾ ಕಾರ್ಯದರ್ಶಿ ಎಂ.ಕೆ.ನವೀದ್ ಮತ್ತಿತರರು ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು